ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇಂದು ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರ ಜೊತೆ ನಡೆಸಿದೆ. ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಉಪಚುನವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಬಗ್ಗೆ ತೀರ್ಮಾನಿಸಲಾಯಿತು.
ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈಗ ಉಪಚುನಾವಣೆ ನಡೆಯುತ್ತಿರುವುದರಿಂದ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಆದರೆ ಈ ಬಗ್ಗೆ ವರಿಷ್ಠರ ಭೇಟಿ ಬಳಿಕ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ತಿಳಿದುಬಂದಿದೆ.
ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇಂದು ಎರಡೂ ಪಕ್ಷಗಳ ನಾಯಕರು ಸಭೆ ನಡೆಸಿದ್ದೇವೆ. ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಮುಂಬರುವ ಪರಿಷತ್ ಚುನಾವಣೆಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಸಭೆ ಮಾಹಿತಿಯನ್ನು ಹೈಕಮಾಂಡ್ ಗೆ ತಿಳಿಸಲಾಗುವುದು ಎಂದರು.