HomeIndia150ಕ್ಕೂ ಹೆಚ್ಚು ಸಂಪ್ರದಾಯಗಳಂತೆ ಪೂಜೆ: 12:29 ರಿಂದ 12:30ರ ಶುಭ ಮುಹೂರ್ತದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ

150ಕ್ಕೂ ಹೆಚ್ಚು ಸಂಪ್ರದಾಯಗಳಂತೆ ಪೂಜೆ: 12:29 ರಿಂದ 12:30ರ ಶುಭ ಮುಹೂರ್ತದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ

ಅಯೋಧ್ಯೆ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಇಂದು ನೆರವೇರಲಿದೆ.

ಪುಷ್ಪಗಳಿಂದ ರಾಮ ಮಂದಿರ ಅಲಂಕರಿಸಲಾಗಿದೆ. ಮಧ್ಯಾಹ್ನ 12 29 ರಿಂದ 12:30 ರವರೆಗೆ 32 ಸೆಕೆಂಡುಗಳಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಲಿದೆ. 150ಕ್ಕೂ ಹೆಚ್ಚು ಸಂಪ್ರದಾಯಗಳಂತೆ ಪೂಜೆ ನೆರವೇರಲಿದ್ದು, 7 ಸಾವಿರಕ್ಕೂ ಅಧಿಕ ವಿಶೇಷ ಅಹ್ವಾನಿತರು ಕಾರ್ಯಕ್ರಮದಲ್ಲಿ ಇರಲಿದ್ದಾರೆ.

32 ಸೆಕೆಂಡ್ ಶುಭ ಮಹೂರ್ತ ಇರಲಿದೆ. 12:29 ರಿಂದ 12:30ರ 32 ಸೆಕೆಂಡ್ ಗಳ ಶುಭಮುಹೂರ್ತದ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಗುತ್ತದೆ. ಕಾಶಿಯ ಪ್ರಸಿದ್ಧ ವೈದಿಕ ಆಚಾರ್ಯ ಗಣೇಶ್ ದ್ರಾವಿಡ್, ಆಚಾರ್ಯ ಲಕ್ಷ್ಮಿಕಾಂತ ದೀಕ್ಷಿತ್ ಅವರ ನಿರ್ದೇಶನದಲ್ಲಿ 121 ವೈದಿಕ ಆಚಾರ್ಯರು ಧಾರ್ಮಿಕ ಕಾರ್ಯ ನೆರವೇರಿಸಲಿದ್ದಾರೆ. ಈ ವೇಳೆ 150ಕ್ಕೂ ಹೆಚ್ಚು ಸಂಪ್ರದಾಯಗಳು ನೆರವೇರಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾಣ ಪ್ರತಿಷ್ಠಾಪನೆ ಶುಭ ಸಮಯ ಕೇವಲ 32 ಸೆಕೆಂಡ್ ಗಳು. ಪ್ರಧಾನಿ ಮೋದಿ ಪ್ರಾಣ ಪ್ರತಿಷ್ಠೆ ಮುಖ್ಯ ಯಜಮಾನರಾಗಿ ಪ್ರತಿಷ್ಠಾಪನೆ ಕಾರ್ಯಗಳಲ್ಲಿ ಭಾಗಿಯಾಗಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular