ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದಲ್ಲಿ ರಾಮತಾರಕ ಹೋಮಕ್ಕೆ ಸಿದ್ಧತೆ ನಡೆಸಲಾಗಿತ್ತು. ಆದರೆ ಹೋಮಕ್ಕೆ ನಿರ್ಬಂಧ ವಿಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲಾಡಳಿತ ರಾಮತಾರಕ ಹೋಮಕ್ಕೆ ನಿರ್ಬಂಧ ವಿಧಿಸಿದ್ದು, ಯಾಗ ಶಾಲೆಗೆ ಬೀಗ ಹಾಕಿರುವ ಘಟನೆ ನಡೆದಿದೆ. ವಿವಾದಿತ ಇನಾಂ ದತ್ತಾತ್ರೇಯ ದರ್ಗಾದ ಸಮೀಪವೇ ಯಾಗ ಶಾಲೆ ಇದ್ದು, ಇಂದು ವಿಶೇಷ ಪೂಜೆಗೆ ಸಿದ್ಧತೆ ನಡೆಸಲಾಗಿತ್ತು.
ಆದರೆ ಕೊನೇಕ್ಷಣದಲ್ಲಿ ಜಿಲ್ಲಾಡಳಿತ ರಾಮತಾರಕ ಹೋಮಕ್ಕೆ ತಡೆ ನೀಡಿದೆ. ಇದರಿಂದ ವ್ಯವಸ್ಥಾಪನಾ ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.