ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ಭಾರತ ಮತ್ತು ವಿಶ್ವದಾದ್ಯಂತದ ಭಕ್ತರು ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಕರ್ನಾಟಕದಿಂದ ಹಲವು ಗಣ್ಯರು ಅಯೋಧ್ಯೆಗೆ ತೆರಳಿದ್ದಾರೆ.
ನಟ , ನಿರ್ಮಾಪಕ ರಿಷಬ್ ಶೆಟ್ಟಿ ಕೂಡ ತನ್ನ ಪತ್ನಿ ಜೊತೆ ಅಯೋಧ್ಯೆಗೆ ತೆರಳಿದ್ದಾರೆ. ಅಯೋಧ್ಯೆಗೆ ತೆರಳಿರುವ ನಟ, ನಿರ್ದೇಶಕ ರಿಷಭ್ ಶೆಟ್ಟಿ, ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೂ ಮುನ್ನ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ.. ಹನುಮನ ದರ್ಶನ’ ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೊ ಹಂಚಿಕೊಂಡಿದ್ದಾರೆ.
ಜನವರಿ 22 ರಂದು ಇಂದು ಮಧ್ಯಾಹ್ನ 12.30 ಕ್ಕೆ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ.