HomeKarnatakaಭೀಕರ ಅಪಘಾತ; ಗಾಲ್ಫ್ ಕ್ಲಬ್ ಕೋಚ್ ದುರ್ಮರಣ

ಭೀಕರ ಅಪಘಾತ; ಗಾಲ್ಫ್ ಕ್ಲಬ್ ಕೋಚ್ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಾಲ್ಫ್ ಕ್ಲಬ್ ಕೋಚ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಂದ್ರಶೇಖರ್ (40) ಮೃತ ದುರ್ದೈವಿ. ಬೈಕ್ ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದರು. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ನಲ್ಲಿ ಹಿಂಬದಿ ಕುಳಿತಿದ್ದ ಸವಾರ ಚಂದ್ರಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಂದ್ರಶೇಖರ್ ಬೆಂಗಳೂರಿನ ಗಾಲ್ಫ್ ಕ್ಲಬ್ ನಲ್ಲಿ ಕೋಚ್ ಆಗಿ ಕೆಲಸ ಮಾಡುತ್ತಿದ್ದರು. ಸುಮನಹಳ್ಳಿ ಡಿಪೋ ಬಳಿ ಈ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular