ಬೆಂಗಳೂರು : ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜ. 31ರಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.
ಕರ್ನಾಟಕದಿಂದ ಅಯೋಧ್ಯೆಗೆ ತೆರಳಲು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಮುಂದಾಗುತ್ತಿದ್ದು, ಈ ಹಿನ್ನೆಲೆ ಭಾರತೀಯ ರೈಲ್ವೇ ಇಲಾಖೆಯು ಕರ್ನಾಟಕದಿಂದ ಆಯೋಧ್ಯೆಗೆ ಜ.31ರಿಂದ 11 ವಿಶೇಷ ರೈಲುಗಳ ಸಂಚಾರವನ್ನು ಆರಂಭಿಸಲಿದೆ.
ಶಿವಮೊಗ್ಗ, ಬೆಳಗಾವಿ ವಿಭಾಗದಿಂದ ಒಂದು ವಿಶೇಷ ಆಸ್ತಾ ರೈಲು ಸಂಚಾರವನ್ನು ಜ.31ರಿಂದ ಹಂತವಾಗಿ ಪ್ರಾರಂಭಿಸಿ ಮಾ.31ಕ್ಕೆ ಮುಕ್ತಾಯಗೊಳಿಸಲಿದೆ . ಬೆಂಗಳೂರು ನೈರುತ್ಯ ರೈಲ್ವೇ ವಿಭಾಗದಿಂದ ಮೂರು, ಹುಬ್ಬಳ್ಳಿ, ಮೈಸೂರು, ಮಂಗಳೂರು ವಿಭಾಗದಿಂದ ತಲಾ ಎರಡು ವಿಶೇಷ ರೈಲುಗಳ ಸಂಚಾರವನ್ನು ಆರಂಭಿಸಲಿದೆ. ಬೆಂಗಳೂರಿನಿಂದ ತೆರಳುವ ಪ್ರಯಾಣಿಕರು ಲಕ್ನೋ ಹಾಗೂ ಬಾದಶಾ ರೈಲುಗಳ ಮೂಲಕ ತೆರಳಿದರೆ ಅಯೋಧ್ಯೆಗೆ ತೆರಳಬಹುದು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಿನ್ನೆ ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಮಾಡ್ತಿದ್ದು, ಇಂದಿನಿಂದ ಭವ್ಯ ರಾಮ ಮಂದಿರ ಸಾರ್ವಜನಿಕರಿಗೆ ಮುಕ್ತವಾಗಲಿದೆ.