HomeKarnatakaBIG NEWS : 'PSIʼ ನೇಮಕಾತಿ ಅಕ್ರಮ : ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು...

BIG NEWS : ‘PSIʼ ನೇಮಕಾತಿ ಅಕ್ರಮ : ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ

ಬೆಂಗಳೂರು : ಪಿಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.

ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದ್ದರು.

ಒಟ್ಟು 470ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಸಿರುವ ತನಿಖಾ ಸಮಿತಿ, ನೇಮಕಾತಿ ವೇಳೆ ಆಗಿರುವ ಲೋಪಗಳ ಬಗ್ಗೆ ಸಂಕ್ಷಿಪ್ತವಾಗಿ ಉಲ್ಲೇಖಿಸಿದೆ. ಪ್ರಕರಣದಲ್ಲಿ ಹಲವು ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂಬ ಆರೋಪ ಮಾಡಲಾಗಿದೆ.ಸಮಿತಿ ಸಲ್ಲಿಸಿದ ವರದಿಯನ್ನು ಕ್ಯಾಬಿನೆಟ್ನ ಮುಂದಿಡಲು ಸಿಎಂ ಚಿಂತನೆ ಮಾಡಿದ್ದಾರೆ. ನಂತರ ವರದಿಯನ್ನು ಜಂಟಿ ಅಧಿವೇಶನದಲ್ಲಿ ಮಂಡಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರವು ಕಳೆದ ವರ್ಷದ ಜುಲೈ 21 ರಂದು ಅಕ್ರಮ ನಡೆದಿರುವ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿತ್ತು. ಕಳೆದ ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಭಾರಿ ಸದ್ದು ಮಾಡಿತ್ತು. ಪಿಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular