HomeEntertainmentಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಖುಷಿ ರವಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಖುಷಿ ರವಿ

ನಟಿ ಖುಷಿ ರವಿ ಇಂದು ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ 2019 ರಲ್ಲಿ ‘ಜಾತರೆ’ ಎಂಬ ಕಿರು ಚಿತ್ರದಲ್ಲಿ ಅಭಿನಯಿಸಿದ್ದ ಇವರಿಗೆ 2020 ರಲ್ಲಿ ‘ದಿಯಾ’ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತು. ಕೊರೊನಾ ಲಾಕ್ಡೌನ್ ಸಮಯದಲ್ಲಿ Ott ಪ್ಲಾಟ್ಫಾರ್ಮ್ ಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಹೊಸ ದಾಖಲೆ ಬರೆಯಿತು.

ನಟಿ ಖುಷಿ ಇತ್ತೀಚಿಗೆ ‘ಸ್ಪೋಕೀ ಕಾಲೇಜ್ ‘ ”S/O ಮುತ್ತಣ್ಣ” ಸೇರಿದಂತೆ ಫುಲ್ ಮೀಲ್ಸ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ  ಹರಿದು ಬಂದಿದೆ.’S/O ಮುತ್ತಣ್ಣ ಚಿತ್ರತಂಡ ಮೇಕಿಂಗ್ ವಿಡಿಯೋ ಒಂದನ್ನು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುವ ಮೂಲಕ ಖುಷಿ ರವಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular