ಗುವಾಹಟಿ : ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಮುಖ್ಯ ಮಾರ್ಗಗಳ ಮೂಲಕ ನಗರವನ್ನು ಪ್ರವೇಶಿಸಲು ಅನುಮತಿ ನಿರಾಕರಿಸಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಯಾತ್ರೆಯನ್ನು ನಗರದಿಂದ ದೂರವಿಡಲು ಮತ್ತು ಗುವಾಹಟಿ ಬೈಪಾಸ್ ಅನ್ನು ಬಳಸಲು ನಿರ್ದೇಶಿಸಿದ ನಂತರ ಘರ್ಷಣೆ ಸಂಭವಿಸಿದೆ. ಯಾತ್ರೆಯನ್ನು ನಗರಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದರು, ಇದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಕಾರಣವಾಯಿತು.
ಹಲವಾರು ಕಾಂಗ್ರೆಸ್ ಬೆಂಬಲಿಗರು ಪಕ್ಷದ ಧ್ವಜಗಳನ್ನು ಹಿಡಿದು, ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.