HomeKarnatakaBIG NEWS : ಸರ್ಕಾರಿ ಸೇವೆಯಿಂದ ನಿವೃತ್ತ ಅಧಿಕಾರಿಗಳ ಬಿಡುಗಡೆ : ರಾಜ್ಯ ಸರ್ಕಾರದಿಂದ ಮಹತ್ವದ...

BIG NEWS : ಸರ್ಕಾರಿ ಸೇವೆಯಿಂದ ನಿವೃತ್ತ ಅಧಿಕಾರಿಗಳ ಬಿಡುಗಡೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆ, ಸಚಿವಾಲಯಗಳಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಬಳಿಕವೂ ವಿವಿಧ ಹುದ್ದೆಗಳಲ್ಲಿ ಮುಂದುವರೆಯುತ್ತಿರುವ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ಮುಖ್ಯಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಆದೇಶ ಹೊರಡಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯೂ ಸೇರಿ ರಾಜ್ಯ ಸರ್ಕಾರದ ಕೆಲವು ಇಲಾಖೆಗಳಲ್ಲಿ ಮತ್ತು ಸಚಿವಾಲಯದಲ್ಲಿ ಅನಗತ್ಯ ಹುದ್ದೆಗಳನ್ನು ಸೃಜಿಸಿ, ನಿವೃತ್ತ ಅಧಿಕಾರಿ, ನೌಕರರನ್ನು ಸಮಾಲೋಚಕರು, ವಿಶೇಷ ಸಂಪನ್ಮೂಲ ವ್ಯಕ್ತಿಗಳಾಗಿ ನೇಮಿಸಿಕೊಳ್ಳಲಾಗಿದೆ.

ಈ ಮೂಲಕ ನಿವೃತ್ತ ನೌಕರರ ನೇಮಕದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಆಗುತ್ತಿದೆ. ಹೀಗಾಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡವರನ್ನು ಬಿಡುಗಡೆ ಮಾಡಿ ಈ ಹುದ್ದೆಗಳಿಗೆ ಹಾಲಿ ಕರ್ತವ್ಯದಲ್ಲಿರುವ ಅಧಿಕಾರಿ, ಸಿಬ್ಬಂದಿ ನಿಯೋಜನೆ ಮಾಡಬೇಕು.  ನಿವೃತ್ತ ಸರ್ಕಾರಿ ಅಧಿಕಾರಿ ಹಾಗೂ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಿ ಎಂದು ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular