HomeKarnatakaಕ್ರಷರ್ ನಿಂದ ಉರುಳಿ ಬಿದ್ದ ಬಂಡೆಯಡಿ ಸಿಲುಕಿ ಇಬ್ಬರು ಕಾರ್ಮಿಕರು ಸಾವು

ಕ್ರಷರ್ ನಿಂದ ಉರುಳಿ ಬಿದ್ದ ಬಂಡೆಯಡಿ ಸಿಲುಕಿ ಇಬ್ಬರು ಕಾರ್ಮಿಕರು ಸಾವು

ತುಮಕೂರು: ಕ್ರಷರ್ ನಿಂದ ಬಂಡೆ ಉರುಳಿ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕೌತಮಾರನಹಳ್ಳಿಯಲ್ಲಿ ಘಟನೆ ನಡೆದಿದೆ.

ಬಿಹಾರದ ಮಹಮದ್ ಅಬ್ದುಲ್(29), ಛತ್ತೀಸ್ ಗಢದ ಮೋನು(24) ಮೃತಪಟ್ಟವರು ಎಂದು ಹೇಳಲಾಗಿದೆ. ಘಟನೆಯಲ್ಲಿ ಛತ್ತೀಸ್ ಗಢದ ಈರ(25) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೌತಮಾರನಹಳ್ಳಿಯಲ್ಲಿ ಕ್ರಷರ್ ನಲ್ಲಿ ಬಂಡೆ ಡ್ರಿಲ್ ಮಾಡುವಾಗ ಮೇಲ್ಭಾಗದಲ್ಲಿದ್ದ ಬಂಡೆ ಸಡಿಲಗೊಂಡು 50 ಅಡಿ ಎತ್ತರದಿಂದ ಕೆಳಕ್ಕೆ ಉರುಳಿದೆ. ಪರಿಣಾಮ ಬಂಡೆಯಡಿ ಸಿಲುಕಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular