HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಕಾಲೇಜುಗಳಲ್ಲಿ ಉಚಿತ ನೀಟ್ ತರಬೇತಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಕಾಲೇಜುಗಳಲ್ಲಿ ಉಚಿತ ನೀಟ್ ತರಬೇತಿ

ಚಿತ್ರದುರ್ಗ: ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಕಾಲೇಜುಗಳಲ್ಲಿ ಉಚಿತವಾಗಿ ನೀಟ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಸೆಂಟರ್ ಗಳಿಗೆ ತೆರಳಿ ದುಬಾರಿ ಶುಲ್ಕ ನೀಡಿ ತರಬೇತಿ ಪಡೆಯುವುದು ತಪ್ಪುತ್ತದೆ ಎಂದು ಹೇಳಿದ್ದಾರೆ.

ಸರ್ಕಾರಿ ಕಾಲೇಜ್ ಗಳಲ್ಲಿ ಉಚಿತ ನೀಟ್ ತರಬೇತಿಗೆ ಅನುದಾನ ನೀಡಲು ಸಿಎಂಗೆ ಮನವಿ ಮಾಡಲಾಗಿದ್ದು, ಅವರು ಅನುದಾನ ನೀಡುವ ಭರವಸೆ ಇದೆ ಎಂದು ಸಚಿವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular