ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ 900ಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಬಾರಿ ಬೆಂಗಳೂರಿನಲ್ಲಿ ಪಿಎಸ್ಐ ಪರೀಕ್ಷೆ ಬಹಳ ಸುಸೂತ್ರವಾಗಿ ನಡೆದಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆದಿಲ್ಲ ಎಂದರು. ಮುಂದಿನ ಹಂತದಲ್ಲಿ 403 PSI ನೇಮಕಾತಿಗೂ ಪರೀಕ್ಷೆ ಮಾಡುತ್ತೇವೆ. ಅದನ್ನು ಕೂಡಾ KEA ಮೂಲಕವೇ ಪರೀಕ್ಷೆ ನಡೆಸುತ್ತೇವೆ ಎಂದರು.
ಶೀಘ್ರವೇ 900ಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತೇವೆ, ಮಂಗಳವಾರ ನಡೆದ ಪರೀಕ್ಷೆಯಲ್ಲಿ 500 ಮತ್ತೆ 403 ಹುದ್ದೆ ಸೇರಿ 900ಕ್ಕೂ ಹೆಚ್ಚು ಪೊಲೀಸ್ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಿದ್ದೇವೆ ಎಂದಿದ್ದಾರೆ.