ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) -3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜ. 28 ರಂದು ಬೆಳಗ್ಗೆ 11.00 ರಿಂದ 12.30ರವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದ್ದು, ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ತಿಳಿಸಲಾಗಿದೆ.
ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಬಾರದು. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಲಾಗಿದೆ ಎಂದು ಡಿ.ಐ.ಜಿ.ಪಿ. ನೇಮಕಾತಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ. 28 ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.ಅರ್ಹ ಅಭ್ಯರ್ಥಿಗಳಿಗೆ ಎಸ್ಎಂಎಸ್ ಮೂಲಕ ಕರೆಪತ್ರದ ಬಗ್ಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ಅನ್ನು ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಡಿಐಜಿಪಿ ನೇಮಕಾತಿ ಹಾಗೂ ಸಮನ್ವಯಾಧಿಕಾರಿ ಎಪಿಸಿ ನೇಮಕಾತಿ ಸಮಿತಿ ಡೈರಕ್ಟರ್ಜನರಲ್ ಆಫ್ ಪೊಲೀಸ್ ನೇಮಕಾತಿ, ಬೆಂಗಳೂರು ಇವರು ಪ್ರಕಟಣೆ ಹೊರಡಿಸಿದ್ದಾರೆ.