ಸಾರ್ವಜನಿಕರೇ ಗಮನಿಸಿ : QR ಕೋಡ್ ಸ್ಕ್ಯಾನ್ ಮಾಡಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ

ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಕಚೇರಿಯಲ್ಲಿ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಆರಂಭಿಸಲಾಗಿರುವ ‘ಕಲಬುರಗಿ ಕನೆಕ್ಟ್’ QR ಕೋಡ್ ಆಧಾರಿತ ಪತ್ರ ನಿರ್ವಹಣಾ ವ್ಯವಸ್ಥೆಗೆ ಜಿಲ್ಲಾದ್ಯಂತ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈಗಾಗಲೇ ಈ ವ್ಯವಸ್ಥೆಯ ಮೂಲಕ ಕಲಬುರಗಿ ಜಿಲ್ಲೆಯ ಸಾಕಷ್ಟು ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದಾರೆ. ನೀವು ಸಹ QR ಕೋಡ್ ನಲ್ಲಿ ಸ್ಕಾನ್ ಮಾಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದಿದ್ದಾರೆ.

ಈ ಅರ್ಜಿಗಳ ವಿಲೇವಾರಿಗಾಗಿ ಜಿಲ್ಲಾಮಟ್ಟದಲ್ಲಿ ಇಲಾಖಾವಾರು 70 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ವ್ಯವಸ್ಥೆಯ ಸಂಪೂರ್ಣ ಸದುಪಯೋಗ ಪಡೆದುಕೊಂಡು ನಿಮ್ಮ ಸಮಸ್ಯೆಗಳಿಗೆ ಆನ್ ಲೈನ್ ಮೂಲಕವೇ ತ್ವರಿತಗತಿಯಲ್ಲಿ ಪರಿಹಾರ ಕಂಡುಕೊಳ್ಳಿ ಎಂದು ಮತ್ತೊಮ್ಮೆ ವಿನಂತಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಕಟಣೆ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read