ಮಂಡ್ಯ : ಮೇಲುಕೋಟೆ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ 30 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಶಿಕ್ಷಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತೀಶ್ (22) ಎಂಬ ಯುವಕನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕೊಲೆಯಾದ ಮಹಿಳೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ದೀಪಿಕಾ ಮೇಲುಕೋಟೆಯ ಎಸ್ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಜನವರಿ 20ರ ಮಧ್ಯಾಹ್ನನಿಂದ ದೀಪಿಕಾ ನಾಪತ್ತೆಯಾಗಿದ್ದಳು. ನಾಪತ್ತೆಯಾದ ಬಗ್ಗೆ ಕುಟುಂಬಸ್ಥರು ಜ.20ರ ಸಂಜೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ನಂತರ ಮೇಲುಕೋಟೆಯ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಂತರ ತನಿಖೆ ಆರಂಭಿಸಿದ ಡಿವೈಎಸ್ಪಿ ಮುರುಳಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯಿಂದ ಕೊಲೆಗೆ ನಿಖರ ಕಾರಣ ತಿಳಿದು ಬರಬೇಕಿದೆ.