ನವದೆಹಲಿ : ಲೋಕಸಭೆ ಚುನಾವಣೆಗೆ ಆಯೋಗವು ತಾತ್ಕಾಲಿಕ ದಿನಾಂಕ ಬಿಡುಗಡೆ ಮಾಡಿದ್ದು, ಏಪ್ರಿಲ್ 16 ಎಂದು ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಯು ರವಾನಿಸಿರುವ ಟಿಪ್ಪಣಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಇದು ಚುನಾವಣಾ ಸಿದ್ಧತೆಗೆ ಸೂಚಿಸಲಾದ ತಾತ್ಕಾಲಿಕ ದಿನಾಂಕ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ಸೋಶಿಯಲ್ ಮೀಡಿಯಾಗಳಲ್ಲಿ ಏಪ್ರಿಲ್ 16 ರಂದು ಲೋಕಸಭೆ ಚುನಾವಣೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆ ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ ಇದು ಅಧಿಕಾರಿಗಳಿಗೆ ಚುನಾವಣಾ ಸಿದ್ಧತೆ ನಡೆಸಲು ಸೂಚಿಸಿ ಕಳುಹಿಸಲಾದ ದಿನಾಂಕವಾಗಿದೆ, ಚುನಾವಣೆಯ ಅಂತಿಮ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ಇದು ಜಿಲ್ಲೆಗಳಲ್ಲಿ ಅಧಿಕಾರಿಗಳು ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದ ತಾತ್ಕಾಲಿಕ ದಿನಾಂಕವಾಗಿದೆ. ಇದು ಅಂತಿಮ ದಿನಾಂಕವಲ್ಲ . ಏಪ್ರಿಲ್ 16ರಿಂದ ಲೋಕಸಭೆ ಚುನಾವಣೆಯ ಪ್ರಕಿಯೆಗಳು ಆರಂಭವಾಗಲಿವೆ. ಈ ಕಾರಣಕ್ಕೆ ದೆಹಲಿಯ 11 ಜಿಲ್ಲಾಗಳಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ ಎಂದು ಚುನಾವಣಾ ಆಯೋಗ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.