ಹಾಸನ: ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಪೌರಾಡಳಿತ ಇಲಾಖೆ ರಹೀಂ ಖಾನ್ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಆಯಾ ಪ್ರದೇಶಗಳಿಗೆ ಅನುಗುಣವಾಗಿ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರ ವಿತರಿಸಲು ಚಿಂತನೆ ನಡೆದಿದೆ. ಈಗಿರುವ ಕ್ಯಾಂಟೀನ್ ಗಳ ಜೊತೆ ಹೆಚ್ಚುವರಿಯಾಗಿ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇಂದಿರಾ ಕ್ಯಾಂಟೀನ್ ಗಳ ಬಗ್ಗೆ ಮುಖ್ಯಮಂತ್ರಿ ವಿಶೇಷ ಕಾಳಜಿ ವಹಿಸಿದ್ದಾರೆ. ಬಡವರು, ಆಸ್ಪತ್ರೆಗಳು ಇರುವ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಗಳನ್ನು ಓಪನ್ ಮಾಡಲಾಗುವುದು ಎಂದು ಹೇಳಿದ್ದಾರೆ.