![](https://kannadadunia.com/wp-content/uploads/2023/12/Cm-siddaramaiah-4.jpg)
ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಜಾತಿ ಗಣತಿ ವರದಿಯನ್ನು ಈ ತಿಂಗಳ ಅಂತ್ಯದೊಳಗೆ ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.31 ಕ್ಕೆ ನನ್ನ ಅಧ್ಯಕ್ಷತೆಯ ಅವಧಿ ಮುಗಿಯುತ್ತದೆ. ಅದರೊಳಗೆ ಜಾತಿಗಣತಿ ವರದಿಯನ್ನು ಸಲ್ಲಿಸಲಾಗುವುದು. ವರದಿ ಪುಸ್ತಕ ಮುದ್ರಣವಾಗುತ್ತಿದೆ. ವರದಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯರನ್ನು ಕೇಳಲಾಗುವುದು ಎಂದು ಹೇಳಿದ್ದಾರೆ.
ಜಾತಿ ಗಣತಿ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯಾಗಲಿದ್ದು, ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ಬಳಿಕ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.