ಮಂಗಳೂರು: ಕನ್ನಡಿಗರಿಗೆ ಖಾಸಗಿ ವಲಯ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಕೇರಳದ ಕಾಸರಗೋಡಿನಲ್ಲಿ ಮಾತನಾಡಿದ ಅವರು, ಕೈಗಾರಿಕಾ ನೀತಿ 2020-25 ರಲ್ಲಿಯೂ ರಾಜ್ಯ ಸರ್ಕಾರದ ಸಬ್ಸಿಡಿ ಸೇರಿ ವಿವಿಧ ಸೌಲಭ್ಯ ಪಡೆಯುತ್ತಿರುವ ಕೈಗಾರಿಕೆಗಳು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎನ್ನುವ ನಿಯಮವಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಿಎಂ ಜೊತೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ ಜಾರಿ ಸಂಬಂಧ ಈಗಾಗಲೇ ಎರಡು ಸಭೆ ನಡೆಸಲಾಗಿದೆ. ಕನ್ನಡಿಗರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.