ರಾಜ್ಯದ ರೈತರಿಗೆ ಗುಡ್ ನ್ಯೂಸ್ : 2-3 ದಿನದಲ್ಲಿ ಬಾಕಿ ರೈತರಿಗೆ ಬರಗಾಲ ಪರಿಹಾರ ಹಣ ಜಮೆ

ಕಲಬುರಗಿ : ರಾಜ್ಯದಲ್ಲಿ ಮಳೆ ಅಭಾವ ಕಾರಣ ಬರಗಾಲ ಘೋಷಣೆ ಮಾಡಿದ್ದರಿಂದ ಬರಗಾಲ ಪರಿಹಾರದ ಆರಂಭಿಕ ಕಂತು ತಲಾ‌ 2,000 ರೂ. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ  ರೈತರಿಗೆ 44.74 ಕೋಟಿ ರೂ. ಜಮೆ‌ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ ರೈತರಿಗೆ 2-3 ದಿನದಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಬರಗಾಲ ಘೋಷಣೆ ಮಾಡಿ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಪರಿಹಾತ ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದೂವರೆಗೆ ಯಾವುದೇ ಹಣ ಬಿಡುಗಡೆಯಾಗಿಲ್ಲ. ಸಂಕಷ್ದದಲ್ಲಿದ ರೈತರಿಗೆ ನೆರವಿಗೆ ಧಾವಿಸಲು ಎನ್.ಡಿ.ಅರ್.ಆಫ್ ಅನುದಾನ ನಿರೀಕ್ಷಿಸಿ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ರಾಜ್ಯದಾದ್ಯಂತ ಒಟ್ಟಾರೆ 35 ಲಕ್ಷ ರೈತರಿಗೆ 650 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಇದೂವರೆಗೆ 24 ಲಕ್ಷ ಜನರಿಗೆ 519 ಕೋಟಿ ರೂ. ಪಾವತಿಯಾಗಿದೆ. 2-3 ದಿನದಲ್ಲಿ ರಾಜ್ಯದ ಉಳಿದ 11-12 ಲಕ್ಷ ಜನರಿಗೆ ಹಣ ಜಮೆ ಮಾಡಲಾಗುತ್ತದೆ ಎಂದರು.

ಡಿ.ಬಿ.ಟಿ. ಹಣ ಪಾವತಿ ಸಂದರ್ಭದಲ್ಲಿ ಎದುರಿಸಲಾಗುತ್ತಿದ್ದು, ಅಧಾರ್, ಬ್ಯಾಂಕ್ ಲಿಂಕ್ ಅಪಡೇಟ್ ಕಾರ್ಯ ಶೇ.60 ರಿಂದ 80ಕ್ಕೆ ಹೆಚ್ಚಿಸಿದರಿಂದ ಶೇ.80ರಷ್ಟು ಜನರಿಗೆ ಪರಿಹಾರ ಸಿಕ್ಕಿದೆ. ನಮ್ಮ‌ ಗುರಿಯಂತೆ ಇನ್ನು ಕನಿಷ್ಠ ಶೇ.5ರಷ್ಟು ಅಪಡೇಟ್ ಕಾರ್ಯ ಮಾಡಬೇಕಿದೆ. ಮುಂದಿನ ಕಂತು ಪಾವತಿಯೊಳಗೆ ಈ ಸಮಸ್ಯೆ ಬಗೆಹರಿಸಬೇಕು. ಇದನ್ನು ಮಿಷನ್ ಮೋಡ್ ನಲ್ಲಿ ಮಾಡಬೇಕು ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರಿಗೆ ಸಚಿವರು ನಿರ್ದೇಶನ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read