ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ನಾಲ್ಕು ಮಂದಿ ಮೃತಪಟ್ಟ ಘಟನೆ ಚಳ್ಳಕೆರೆ ಬಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಎಂಬಲ್ಲಿ ಅಪಘಾತ ಸಂಭವಿಸಿದೆ.ಒಂದೇ ಕುಟುಂಬದ ಆರು ಮಂದಿ ಕಾರಿನಲ್ಲಿ ಬೆಂಗಳೂರಿನ ಕಡೆ ಬರುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಮೃತರನ್ನು ರಾಯಚೂರಿನ ದೇವದುರ್ಗ ತಾಲೂಕಿನ ದಂಡಮ್ಮಹಳ್ಳಿ ನಿವಾಸಿಗಳಾದ ಲಿಂಗಪ್ಪ (26), ಸಿಂಧು ಶ್ರೀ(2) ಅಯ್ಯಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಎಂದು ಗುರುತಿಸಲಾಗಿದೆ.
ಸಾಣಿಕೆರೆ ಬಳಿ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಅಪ್ಪಳಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ.ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಘಟನೆ ನಡೆದಿದೆ. ಚಾಲಕನ ನಿದ್ರೆ ಮಂಪರಿನಲ್ಲಿ ವಾಹನ ಚಲಾಯಿಸುತ್ತಿದ್ದನು ಎಂದು ತಿಳಿದು ಬಂದಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.