HomeKarnatakaBIG NEWS : ನಾಳೆಯಿಂದ 'ಸಂವಿಧಾನ ಜಾಗೃತಿ' ಜಾಥಾ ಆರಂಭ, 1 ತಿಂಗಳು ರಾಜ್ಯಾದ್ಯಂತ ಸಂಚಾರ

BIG NEWS : ನಾಳೆಯಿಂದ ‘ಸಂವಿಧಾನ ಜಾಗೃತಿ’ ಜಾಥಾ ಆರಂಭ, 1 ತಿಂಗಳು ರಾಜ್ಯಾದ್ಯಂತ ಸಂಚಾರ

ಬೆಂಗಳೂರು : ನಾಳೆಯಿಂದ (ಜ.26) ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಆರಂಭವಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದು ತಿಂಗಳ ಕಾಲ “ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧಚಿತ್ರ” ಮೆರವಣಿಗೆ ನಡೆಯಲಿದೆ .

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು , ನಮ್ಮ ಹಕ್ಕುಗಳ ಜನನಿ, ನಮ್ಮ ಸಂವಿಧಾನ”ಡಾ|| ಬಿ.ಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಅಂಗೀಕರಿಸಿಕೊಂಡ 75ನೇ ವರ್ಷಾಚರಣೆ ಅಂಗವಾಗಿ ನಮ್ಮ ಸರ್ಕಾರವು 2024ರ ಜನವರಿ 26ರಿಂದ ” ಸಂವಿಧಾನ ಜಾಗೃತಿ ಜಾಥಾ”ವನ್ನು ಹಮ್ಮಿಕೊಂಡಿದೆ. ಸಂವಿಧಾನದ ಅರಿವು ಮೂಡಿಸುವ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವೂ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಂವಿಧಾನ ರೂಪಿಸಿ 75 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರ ಇಡೀ ರಾಜ್ಯದ ಬಹುತೇಕ ಗ್ರಾಮಗಳನ್ನು ಒಳಗೊಂಡಂತೆ ಕಾರ್ಯಕ್ರಮ ರೂಪಿಸಲಾಗಿದೆ ಸಂವಿಧಾನದ ಮಹತ್ವ ಹಾಗೂ ಈ ದೇಶದ ಜನತೆಗೆ ಸಂವಿಧಾನ ನೀಡಿರುವ ಹಕ್ಕುಗಳ ಕುರಿತಂತೆ ರಾಜ್ಯದ ಮಹಿಳೆಯರು, ಯುವಜನರು ಹಾಗೂ ನಾಗರಿಕರಿಗೆ ಬಹು ಮಾಧ್ಯಮಗಳ ಮೂಲಕ ಅರಿವು ಮೂಡಿಸಲು ಈ ವಿಭಿನ್ನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಪರಂಪರೆಯನ್ನು ಅನಾವರಣ

ಸಂವಿಧಾನ ಪೀಠಿಕೆಯ ಮುದ್ರಿತ ಪ್ರತಿಗಳ ವಿತರಣೆ, ಬಸವಣ್ಣನವರ ಸಂದೇಶ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ತಜ್ಞರಿಂದ ಭಾಷಣ, ಜಾನಪದ ನೃತ್ಯ ಪ್ರದರ್ಶನ ಹಾಗೂ ಜಾಥದಲ್ಲಿ ಸಂಚರಿಸಲಿರುವ ಎಲ್.ಇ.ಡಿ ವಾಹನದ ಮೂಲಕ ವಿಡಿಯೋ ಪ್ರದರ್ಶಿಸುವ ಮೂಲಕ ನಮ್ಮ ಪರಂಪರೆಯನ್ನು ಅನಾವರಣಗೊಳಿಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಇತ್ತೀಚೆಗೆ ಹೇಳಿದ್ದರು.

ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಸ್ಥಬ್ಧಚಿತ್ರಗಳನ್ನು ಸೃಜನಶೀಲವಾಗಿಸಲು ಜಿಲ್ಲಾ ಸಮಿತಿಗಳು ಯೋಚಿಸಬೇಕೆಂದು ಸೂಚಿಸಲಾಗಿದೆ. ಇನ್ನು ರಾಜ್ಯದ ಏಳು ಜಿಲ್ಲೆಗಳ ಹತ್ತು ಸ್ಥಳಗಳಿಗೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿದ್ದು, ಆ ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಇತ್ತೀಚೆಗೆ ಹೇಳಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular