ಮೈಸೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೆಟ್ಟರ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಲ್ಲ, ಅವರು ಬಿಜೆಪಿ ಸೇರ್ಪಡೆ ವದಂತಿ ಎಂದಿದ್ದಾರೆ. ಇದರ ನಡುವೆ ಶೆಟ್ಟರ್ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜಗದೀಶ್ ಶೆಟ್ಟರ್ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.