![](https://kannadadunia.com/wp-content/uploads/2021/10/Jagadish-Shettar-800x445-1.jpg)
ನವದೆಹಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಮರು ಸೇರ್ಪಡೆ ಬಹುತೇಕ ಫಿಕ್ಸ್ ಆಗಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.
ಇಂದು ದೆಹಲಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಮಿತ್ ಶಾ ಅವರನ್ನು ಬೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ಮರು ಸೇರ್ಪಡೆಗೆ ಜಗದೀಶ್ ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಇಂದು ದೆಹಲಿಯಲ್ಲಿ ಜಗದೀಶ್ ಶೆಟ್ಟರ್ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸೇರ್ಪಡೆ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದು, ದೆಹಲಿಯಿಂದಲೇ ಕಾಂಗ್ರೆಸ್ ಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.