HomeKarnataka'ಜಗದೀಶ್ ಶೆಟ್ಟರ್' ಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು –ಸಿಎಂ ಸಿದ್ದರಾಮಯ್ಯ

‘ಜಗದೀಶ್ ಶೆಟ್ಟರ್’ ಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು –ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಗದೀಶ್ ಶೆಟ್ಟರ್ ಬಿಜೆಪಿ ಮರು ಸೇರ್ಪಡೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಸೇರಿದ್ದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಯಾವ ಕಾರಣಕ್ಕೆ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಂದು ನನಗೆ ಗೊತ್ತಿಲ್ಲ ಎಂದರು.

ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಮತ್ತೆ ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು, ಆ ನಂತರ ಸಿಕ್ಕಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular