ಶೃಂಗೇರಿ : ಶೃಂಗೇರಿ ಶಾರದ ಪೀಠದ ನೂತನ ಸಿಇಒ ಮತ್ತು ಆಡಳಿತಾಧಿಕಾರಿಯಾಗಿ ಆಗಿ ಪಿ. ಎ. ಮುರಳಿ ಅವರನ್ನು ನೇಮಕ ಮಾಡಲಾಗಿದೆ.
1989ರಲ್ಲಿ ಡಾ. ವಿ. ಆರ್. ಗೌರಿಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು. ಇದಾದ ಬಳಿಕ ಸುಮಾರು 35 ವರ್ಷಗಳ ಕಾಲ ಡಾ. ವಿ ಆರ್ ಗೌರಿಶಂಕರ್ ಮಠದ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಇದೀಗ ಶ್ರೀ ಶಾರದ ಪೀಠದ ನೂತನ ಸಿಇಒ ಮತ್ತು ಆಡಳಿತಾಧಿಕಾರಿ ಆಗಿ ಪಿ. ಎ. ಮುರಳಿ ಅವರನ್ನು ನೇಮಿಸಿ ಶೃಂಗೇರಿ ಜಗದ್ಗುರುಗಳು ಆದೇಶ ಹೊರಡಿಸಿದ್ದಾರೆ. ಹಾಗೂ ವಿ.ಆರ್ ಗೌರಿಶಂಕರ್ ಅವರು ನೂತನ ಸಿಇಒ . ಎ. ಮುರಳಿ ಅವರಿಗೆ ಮುಖ್ಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.