ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್ ಅಲರ್ಟ್ ಆಗಿದ್ದು, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಯನ್ನು ಕರೆಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.
ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗುತ್ತಿದ್ದಂತೆ ಅಲರ್ಟ್ ಆದ ಡಿಸಿಎಂ ಡಿಕೆಶಿ ಲಕ್ಷ್ಮಣ್ ಸವದಿಯನ್ನು ಕರೆಸಿ ಮಾತನಾಡಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದು, ಅಥಣಿ ಶಾಸಕರಾದ ಲಕ್ಷ್ಮಣ್ ಸವದಿ ಅವರು ಇಂದು ನನ್ನನ್ನು ಭೇಟಿಯಾಗಿ ಹಲವು ವಿಚಾರಗಳ ಕುರಿತು ಚರ್ಚಿಸಿದರು ಎಂದು ಟ್ವೀಟ್ ಮಾಡಿದ್ದಾರೆ.