ಕಲಬುರಗಿ : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ಸಂಸ್ಥೆಯಲ್ಲಿ 9000 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸಾರಿಗೆ ಸಂಸ್ಥೆಯಲ್ಲಿ 13800 ನೌಕರರು ನಿವೃತ್ತಿ ಯಾಗಿದ್ದು, ಇದರಲ್ಲಿ 9000 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಮಾರ್ಚ ಅಂತ್ಯದೊಳಗೆ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
9 ಸಾವಿರ ಸಿಬ್ಬಂದಿ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಇದರಲ್ಲಿ ಕೆ.ಕೆ.ಆರ್.ಟಿ.ಸಿ. ಸಂಸ್ಥೆಯ 1,680 ನೇಮಕಾತಿ ಸೇರಿವೆ. 500 ಜನರಿಗೆ ಅನುಕಂಪ ಮೇಲೆ ಉದ್ಯೋಗ ನೀಡಲಾಗಿದೆ. ಕೆ.ಎಸ್.ಆರ್.ಟಿ.ಸಿ ಮತ್ತು ಕೆ.ಕೆ.ಆರ್.ಟಿ.ಸಿ. ಸಂಸ್ಥೆಯಲ್ಲಿನ ಸಾರಿಗೆ ನೌಕರರು ಅಪಘಾತದಲ್ಲಿ ಮರಣ ಹೊಂದಿದಲ್ಲಿ 1 ಕೋಟಿ ರೂ. ಜೀವ ವಿಮೆ ಒದಗಿಸುವ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.