![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಬಳಿ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಚಾಲಕ ಮಲ್ಲು ಪೂಜಾರಿ (34), ಕಲ್ಲಪ್ಪ ಕೌಟಗಿ (34), ಕಾಮಾಕ್ಷಿ ಬಡಿಗೇರ್ (35), ತುಕಾರಾಮ್ ತಳೇವಾಡ (30) ಎಂಬುವರು ಮೃತಪಟ್ಟಿದ್ದು, ಮೃತರೆಲ್ಲರೂ ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರು.