ಧಾರವಾಡ: ಅಯೋಧ್ಯೆ ಶ್ರೀ ರಾಮ ಮಂದಿರ ಮೇಲೆ ಹಸಿರು ಧ್ವಜ ಹಾರಿಸಿದ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಯುವಕನನ್ನು ಬಂಧಿಸಲಾಗಿದೆ.
ಇದರ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ನಡೆದಿದ್ದು, ಯುವಕನ ನಡೆಗೆ ಆಕ್ರೋಶಗೊಂಡ ಸ್ಥಳೀಯರು ಗ್ರಾಮದಲ್ಲಿರುವ ಈದ್ಗಾ ಮೈದಾನದ ಗುಂಬಜ್ ವೊಂದನ್ನು ಹಾನಿಗೊಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್ ಮತ್ತು ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ್ ಬ್ಯಾಕೋಡ್ ಸಿಬ್ಬಂದಿ ಸಹಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಹಾನಿಯಾಗಿದ್ದ ಗುಂಬಜ್ ದುರಸ್ತಿ ಮಾಡಿಸಲಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲಾಗಿದೆ. ಘಟನೆಗೆ ಕಾರಣರಾದ 10 ಜನರನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.