ಬೆಂಗಳೂರು: ರಾಜ್ಯದಲ್ಲಿ 108 ಆಂಬುಲೆನ್ಸ್ ಗಳ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಸಮೀಪದ ಸೊಂಡೆಕೊಪ್ಪ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು, 108 ಆಂಬುಲೆನ್ಸ್ ಗಳ ನಿಯಂತ್ರಣ ಬಗ್ಗೆ ಸೂಕ್ತ ಕ್ರಮಗಳಿಲ್ಲದ ಕಾರಣ ಅನೇಕ ಸಮಸ್ಯೆಗಳಿವೆ. ಹೀಗಾಗಿ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
108 ಆಂಬುಲೆನ್ಸ್ ಏಜೆನ್ಸಿ ಯಾವ ರೀತಿ ನಡೆಯಬೇಕು ಎನ್ನುವುದರ ಕುರಿತಾಗಿ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಆಂಬುಲೆನ್ಸ್ ಸೇವೆಯ ಸಮಸ್ಯೆ ಬಗೆಹರಿಸುವ ಅಗತ್ಯ ಇರುವ ಕಾರಣ ಸಾಫ್ಟ್ವೇರ್ ಮತ್ತು ಹಳೆ ವ್ಯವಸ್ಥೆ ಬದಲಿಸಿ ಪಾರದರ್ಶಕತೆ ತರಲು ಒಂದು ತಿಂಗಳಲ್ಲಿ ಎಲ್ಲಾ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.