ಬೆಂಗಳೂರು : ಬೆಂಗಳೂರಿನಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿದ್ದಾರೆ.
ನಂತರ ಭಾಷಣ ಮಾಡಿದ ರಾಜ್ಯಪಾಲರು ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳು. ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ ಎಂದರು.
ಗೃಹಲಕ್ಷ್ಮೀ ಮತ್ತು ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಭೀಕರ ಬರಗಾಲ ಹಿನ್ನೆಲೆ ಬರಪೀಡಿತ ತಾಲೂಕುಗಳನ್ನ ಘೋಷಿಸಲಾಗಿದೆ ಎಂದರು. ಗ್ಯಾರಂಟಿ ಯೋಜನೆಗಳಿಂದ ಎಲ್ಲರಿಗೂ ಅನುಕೂಲವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು.