ಬೆಂಗಳೂರು : ಬೆಂಗಳೂರಲ್ಲಿ ಪ್ರಿಸ್ಕೂಲ್ನ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಡೇ ಕೇರ್ ಸೆಂಟರ್ ಒಂದರಲ್ಲಿ ಮೂರನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಿಸದೇ 3 ದಿನದ ಬಳಿಕ ಮೃತಪಟ್ಟಿದೆ.
ಕೇರಳ ಮೂಲದ ಟೆಕ್ಕಿ ದಂಪತಿ ಜಿಟೋ ಟಾಮಿ ಜೋಸೆಫ್, ಬಿನಿಟೋ ಥಾಮಸ್ ಪುತ್ರಿ ಜೀನಾ ಎಂಬ ಮಗು ಜ.22 ರಂದು ಖಾಸಗಿ ಡೆಲ್ಲಿ ಪ್ರಿ ಸ್ಕೂಲ್ ನ ನರ್ಸರಿ ವಿಭಾಗದಲ್ಲಿ ಮಹಡಿ ಮೇಲೆ ಆಟವಾಡುತ್ತಿದ್ದಾಗ ಮಹಡಿಯಿಂದ ಬಿದ್ದು ತಲೆಗೆ ಗಂಭೀರ ಗಾಯಗಳಾಗಿತ್ತು, 3 ದಿನ ಜೀವನ್ಮರಣ ಹೋರಾಟ ನಡೆಸಿದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.