HomeKarnatakaALERT : ಒಬ್ಬಂಟಿಯಾಗಿ ಪ್ರಯಾಣಿಸುವ ಅಪ್ರಾಪ್ತರ ಮೇಲೆ ನಿಗಾ ಇಡಿ : ಸಾರಿಗೆ ಇಲಾಖೆಯಿಂದ...

ALERT : ಒಬ್ಬಂಟಿಯಾಗಿ ಪ್ರಯಾಣಿಸುವ ಅಪ್ರಾಪ್ತರ ಮೇಲೆ ನಿಗಾ ಇಡಿ : ಸಾರಿಗೆ ಇಲಾಖೆಯಿಂದ ಸಿಬ್ಬಂದಿಗಳಿಗೆ ಮಹತ್ವದ ಪ್ರಕಟಣೆ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಪಾಲಕರಿಗೆ ಗೊತ್ತಾಗದಂತೆ ಮನೆಯಿಂದ ಹೊರಗೆ ಹೋಗುತ್ತಿರುವುದರಿಂದ ಪೋಷಕರು ಆತಂಕವಾಗುತ್ತಿರುವುದಲ್ಲದೇ, ಸಮಾಜದ ಸ್ವಾಸ್ತ್ಯ ಹಾಳಾಗುವುದಕ್ಕೂ ಪ್ರಮುಖ ಕಾರಣವಾಗುತ್ತಿದೆ. ಆದ್ದರಿಂದ ಬಸ್ಸುಗಳಲ್ಲಿ ಪಾಲಕರ ರಹಿತ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿರುವುದು ಕಂಡುಬಂದಲ್ಲಿ, ಮಕ್ಕಳ ಸಹಾಯವಾಣಿಗೆ ತಿಳಿಸುವಂತೆ ಚಾಲನಾ ಸಿಬ್ಬಂದಿಗಳಿಗೆ ಸಾರಿಗೆ ಇಲಾಖೆ ಸೂಚಿಸಿದೆ.

ಶಾಲಾ ಸಮವಸ್ತ್ರದಲ್ಲಿರುವ ಮಕ್ಕಳನ್ನ ಹೊರತುಪಡಿಸಿ ಬಸ್ಸುಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿರುವುದು ಕಂಡುಬಂದಲ್ಲಿ ಅವರ ಮೇಲೆ ನಿಗಾ ಇರಿಸಬೇಕು. ಮಕ್ಕಳ ಹಾವ-ಭಾವದಲ್ಲಿ ಗೊಂದಲಗಳಿದಲ್ಲಿ ಅಥವಾ ಅನುಮಾನಸ್ಪದವಾಗಿ ಪ್ರಯಾಣಿಸುತ್ತಿರುವುದು ಕಂಡುಬಂದಲ್ಲಿ ಅಂತಹ ಮಕ್ಕಳನ್ನ ಗುರುತಿಸಿ ಅವರ ಬಳಿ ಮಾತನಾಡಿ ಪೋಷಕರ ಬಗ್ಗೆ ಮಾಹಿತಿಯನ್ನು ಪಡೆಯಬೇಕು. ಮಕ್ಕಳು ಗೊಂದಲದ ಉತ್ತರವನ್ನ ನೀಡಿದ್ದಲ್ಲಿ, ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಬೇಕು. ಹತ್ತಿರದ ಪೊಲೀಸ್ ಠಾಣೆಗೆ ಅಂತಹ ಮಕ್ಕಳನ್ನು ಕರೆದೊಯ್ಯುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಗೊ೦ದಲ ಭಾವದಲ್ಲಿ ಒಬ್ಬ೦ಟಿಯಾಗಿ ಪ್ರಯಾಣಿಸುವ ಮಕ್ಕಳ ಮೇಲೆ ವಿಶೇಷ ಗಮನವಿರಿಸಲು ಚಾಲನಾ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಮಕ್ಕಳ ನಡೆ ಅನುಮಾನಾಸ್ಪದವೆನಿಸಿದರೆ ಸಮೀಪದ ಪೊಲೀಸ್ ಠಾಣೆಗೆ ಕರೆದೊಯ್ದಿರಿಅಥವಾ ಸಹಾಯವಾಣಿ 1098 ಸಂಪರ್ಕಿಸಿ ಎಂದು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular