ನವದೆಹಲಿ : 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಕರ್ತವ್ಯಪಥದಲ್ಲಿ ಸಂಭ್ರಮ ಮನೆ ಮಾಡಿದೆ.
ಗಣರಾಜ್ಯೋತ್ಸವದಲ್ಲಿ ಪ್ರಮುಖವಾಗಿ ‘ಫ್ರೆಂಚ್ ವಿದೇಶಿ ಪಡೆ’ ಪಥಸಂಚಲನ ಗಮನ ಸೆಳೆದಿದೆ. ಫ್ರಾನ್ಸ್ ಸೇನಾ ತುಕಡಿ, ಯುದ್ಧವಿಮಾನಗಳು ಪಥಸಂಚನದಲ್ಲಿ ಭಾಗಿಯಾಗಿವೆ. ಯೂರೋಪ್, ಆಫ್ರಿಕಾ, ಮಧ್ಯಪ್ರಾಚ್ಯದಲ್ಲಿ ನಿಯೋಜನೆಗೊಂಡ ‘ಫ್ರೆಂಚ್ ವಿದೇಶಿ ಪಡೆ’ 75ನೇ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗಿಯಾಗಿದೆ. 30 ಮಂದಿ ಸಂಗೀತಗಾರರು ತಮ್ಮ ರೆಜಿಮೆಂಟ್ ಗೀತೆ ಗಾಯನ ನುಡಿಸಿದರು.
2023ರಲ್ಲಿ ಪ್ಯಾರಿಸ್ ಬ್ಯಾಸ್ಟಿಲ್ ಡೇನಲ್ಲಿ ಭಾರತ ಸೇನೆ ಪಾಲ್ಗೊಂಡಿತ್ತು, ಹೀಗಾಗಿ ಇಂದು ಫ್ರೆಂಚ್ ವಿದೇಶಿ ಪಡೆ ಪಥಸಂಚಲನದಲ್ಲಿ ಭಾಗಿಯಾಗಿದೆ. ಕ್ಯಾಪ್ಟನ್ ಖೌರ್ಡಾ ನೇತೃತ್ವದಲ್ಲಿ ಫ್ರೆಂಚ್ ಸೇನಾ ಬ್ಯಾಂಡ್ ಭಾಗಿಯಾಗಿದೆ.