HomeKarnatakaBREAKING : 'ಗಣರಾಜ್ಯೋತ್ಸವದ ಪರೇಡ್' ವೇಳೆ ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಿದ ವ್ಯಕ್ತಿ ;...

BREAKING : ‘ಗಣರಾಜ್ಯೋತ್ಸವದ ಪರೇಡ್’ ವೇಳೆ ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಿದ ವ್ಯಕ್ತಿ ; ಪೊಲೀಸ್ ವಶಕ್ಕೆ

ಬೆಂಗಳೂರು : ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆಯುತ್ತಿದ್ದ ಗಣರಾಜ್ಯೋತ್ಸವ ಪರೇಡ್ ವೇಳೆ ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ವ್ಯಕ್ತಿಯೋರ್ವ ನುಗ್ಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೈಸೂರು ಮೂಲದ ಪರಶುರಾಮ್ ಎಂಬುವವರು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

KPSC ಆರ್ಡರ್ ವಿಳಂಬದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲು ಬಂದಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡದೇ ಇದ್ದರಿಂದ ಪರಶುರಾಮ್ ಸಿಎಂ ಬಳಿ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular