ಮಂಡ್ಯ : ಬಿಜೆಪಿ, ಜೆಡಿಎಸ್ ನಿಂದ 30 ಜನ ಕಾಂಗ್ರೆಸ್ ಗೆ ಬರ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ ಬರುವ ಕೆಲವು ಜನರ ಹೆಸರನ್ನು ಹೇಳಿದರೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಗೆ ಶಾಕ್ ಆಗುತ್ತೆ, ಸುಮ್ಮನೆ ಇದನ್ನೆಲ್ಲಾ ಬಿಟ್ಟು ಚುನಾವಣೆ ಸಿದ್ಧತೆ ಮಾಡಿಕೊಂಡು ಬರಲಿ ಎಂದು ತಿರುಗೇಟು ನೀಡಿದರು.
ನಮ್ಮಲ್ಲಿ ಯಾವುದೇ ರೀತಿ ಆಪರೇಷನ್ ನಡೆಯುತ್ತಿಲ್ಲ, ಸಿಎಂ ಸಿದ್ದರಾಮಯ್ಯ , ಡಿಕೆಶಿ ಅವರ ಅಭಿವೃದ್ಧಿ ಕೆಲಸಗಳನ್ನು ನೋಡಿ ಅವರಾಗಿಯೇ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದರು. ಬಿಜೆಪಿ, ಜೆಡಿಎಸ್ ನಿಂದ 30 ಜನ ಕಾಂಗ್ರೆಸ್ ಗೆ ಬರ್ತಾರೆ, ಅವರನ್ನು ಚುನಾವಣೆ ಮೊದಲು ಕರೆದುಕೊಳ್ಳಬೇಕಾ..? ಅಥವಾ ಚುನಾವಣೆ ನಂತರ ಕರೆದುಕೊಳ್ಳಬೇಕಾ ಎಂದು ಯೋಚಿಸುತ್ತಿದ್ದೇವೆ ಎಂದು ಟಾಂಗ್ ನೀಡಿದರು.