HomeKarnatakaBIG NEWS : ರಾಜ್ಯ ಸರ್ಕಾರದಿಂದ ‘ಬ್ರಾಹ್ಮಣ ಸಮುದಾಯ’ ಕ್ಕೆ ಗುಡ್ ನ್ಯೂಸ್: ಈ...

BIG NEWS : ರಾಜ್ಯ ಸರ್ಕಾರದಿಂದ ‘ಬ್ರಾಹ್ಮಣ ಸಮುದಾಯ’ ಕ್ಕೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ‘ಸಹಾಯಧನ’

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಲಾಭವನ್ನು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ತಮ್ಮ ಕಚೇರಿಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಾಗಿ ಬ್ಯಾಂಕ್ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ. 20ರಷ್ಟು ಹಣವನ್ನು ಸರ್ಕಾರ “ಸ್ವಾವಲಂಬಿ” ಯೋಜನೆ ಅಡಿಯಲ್ಲಿ ಸಹಾಯಧನ ನೀಡಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ತ್ರೀಕೃತ ಬ್ಯಾಂಕ್ ಗಳಿಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ. ಜನವರಿ 31 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುಜಿ/ಪಿಜಿ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಸಿಇಟಿ ಪ್ರವೇಶ ಪರೀಕ್ಷೆ ಮೂಲಕ ತೇರ್ಗಡೆಯಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ, ದಾಖಲಾತಿ ಶುಲ್ಕದ ಮೊತ್ತದ 2/3 ಭಾಗ ಹಾಗೂ ಗರಿಷ್ಠ ರೂ. 1 ಲಕ್ಷದ ವರೆಗೆ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಸರ್ಕಾರ ಪಾವತಿಸಲಿದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ.31 ಕೊನೆಯ ದಿನವಾಗಿರಲಿದೆ ಎಂದು ಅವರು ತಿಳಿಸಿದರು.

ಸಾಂದೀಪಿನಿ ಶಿಷ್ಯ ವೇತನ

ಮೆಟ್ರಿಕ್ ನಂತರದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ 15,000 ರೂ. ವರೆಗೆ “ಸಾಂದೀಪಿನಿ” ಯೋಜನೆ ಅಡಿ ಶಿಷ್ಯ ವೇತನ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular