HomeIndiaBIG NEWS: ಫೆ. 5ರ ವಿಶೇಷ ವಿಧಾನಸಭೆ ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಉತ್ತರಾಖಂಡ...

BIG NEWS: ಫೆ. 5ರ ವಿಶೇಷ ವಿಧಾನಸಭೆ ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಉತ್ತರಾಖಂಡ ಸರ್ಕಾರ ನಿರ್ಧಾರ

ನವದೆಹಲಿ: ಬಿಜೆಪಿ ನೇತೃತ್ವದ ಉತ್ತರಾಖಂಡ ಸರ್ಕಾರವು ಫೆಬ್ರವರಿ 5 ರಂದು ತನ್ನ ವಿಶೇಷ ಏಕದಿನ ವಿಶೇಷ ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಕೈಗೆತ್ತಿಕೊಂಡು ಅಂಗೀಕರಿಸಲಿದೆ ಎಂದು ಹೇಳಲಾಗಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಐದು ಸದಸ್ಯರ ಸಮಿತಿಯು ಫೆಬ್ರವರಿ 2 ಅಥವಾ ಫೆಬ್ರವರಿ 3 ರಂದು ಸರ್ಕಾರಕ್ಕೆ ಈ ವಿಷಯದ ಬಗ್ಗೆ ವರದಿಯನ್ನು ಹಸ್ತಾಂತರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ವರದಿಯು ಲಿಂಗ ಸಮಾನತೆ ಮತ್ತು ಪೂರ್ವಜರ ಆಸ್ತಿಗಳ ಮೇಲಿನ ಮಹಿಳೆಯರ ಹಕ್ಕುಗಳನ್ನು ಒತ್ತಿಹೇಳಿದೆ, ಆದಾಗ್ಯೂ, ಮಹಿಳೆಯರ ಮದುವೆಯ ವಯಸ್ಸಿಗೆ ಸಂಬಂಧಿಸಿದ ಯಾವುದೇ ಶಿಫಾರಸುಗಳಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ದಿನಗಳ ಹಿಂದೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ರಾಜ್ಯದಲ್ಲಿ ಯುಸಿಸಿ ಜಾರಿ ಕುರಿತು ಸುಳಿವು ನೀಡಿ ಸರ್ಕಾರ ಶೀಘ್ರದಲ್ಲೇ ಕೋಡ್ ತರಲಿದೆ ಎಂದು ಹೇಳಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular