![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಎರಡು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.
ಬೆಂಗಳೂರಿನ ಉಪ್ಪಾರಪೇಟೆ ಠಾಣಾ ವ್ಯಾಪ್ತಿಯ ಬಳೆಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯಿಂದ ಎರಡು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಕಟ್ಟಡದಲ್ಲಿ ಸಿಲುಕಿದ್ದ ಇಬ್ಬರು ಯುವಕರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದೆ.
ಕಟ್ಟಡದಲ್ಲಿ ಪೇಂಟಿಂಗ್, ಬ್ಯಾಗ್ ಅಂಗಡಿ ಬೆಂಕಿಗಾಹುತಿಯಾಗಿದ್ದು, ಸುಮಾರು ೩೦ ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟುಕರಕಲಾಗಿವೆ. ಕೃಷ್ಣಮೂರ್ತಿ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದ್ದು, ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಉಪ್ಪಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.