HomeIndiaದೆಹಲಿಯ ಮನೆಯಲ್ಲಿ ಭೀಕರ ಅಗ್ನಿ ಅವಘಡ: 9 ತಿಂಗಳ ಮಗು ಸೇರಿ ನಾಲ್ವರು ಸಾವು

ದೆಹಲಿಯ ಮನೆಯಲ್ಲಿ ಭೀಕರ ಅಗ್ನಿ ಅವಘಡ: 9 ತಿಂಗಳ ಮಗು ಸೇರಿ ನಾಲ್ವರು ಸಾವು

ನವದೆಹಲಿ: ದೆಹಲಿಯ ಶಹದಾರಾ ಪ್ರದೇಶದ ಬಹುಮಹಡಿ ಕಟ್ಟಡದ ನೆಲ ಮಹಡಿಯಲ್ಲಿರುವ ಮನೆಯಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಂಬತ್ತು ತಿಂಗಳ ಹೆಣ್ಣು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಹದಾರಾ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಸಂಜೆ 5:22 ಕ್ಕೆ ಕರೆ ಬಂದಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 6.55ರ ವೇಳೆಗೆ ಐದು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿದವು. ಕಟ್ಟಡದ ನೆಲಮಹಡಿಯಲ್ಲಿರುವ ಮನೆಯೊಂದರಲ್ಲಿ ಇರಿಸಲಾಗಿದ್ದ ವೈಪರ್ಗಳು ಮತ್ತು ರಬ್ಬರ್ ಕತ್ತರಿಸುವ ಯಂತ್ರದಂತಹ ರಬ್ಬರ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್ಎಸ್) ಮುಖ್ಯಸ್ಥ ಅತುಲ್ ಗರ್ಗ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಕಟ್ಟಡದಿಂದ ಆರು ಜನರನ್ನು ರಕ್ಷಿಸಿ ಜಿಟಿಬಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಅವರು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular