![](https://kannadadunia.com/wp-content/uploads/2022/05/assault-759.jpg)
ತುಮಕೂರು : ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರೌಡಿಗಳ ರೀತಿ ವಿದ್ಯಾರ್ಥಿಗಳ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ತಿಪಟೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ವಿದ್ಯಾರ್ಥಿಗಳ ಹೊಡೆದಾಡಿಕೊಂಡಿದ್ದು, ವಿದ್ಯಾರ್ಥಿಗಳ ಪುಂಡಾಟಕ್ಕೆ ತಿಪಟೂರಿನ ಸಾರ್ವಜನಿಕರು ಕಂಗಾಲಾಗಿದ್ದಾರೆ. ಗ್ಯಾಂಗ್ ಕಟ್ಟಿಕೊಂಡು ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಬಡಿದಾಟಕ್ಕೆ ಹೊರಗಿನ ಪುಂಡರ ಗ್ಯಾಂಗ್ ಎಂಟ್ರಿಕೊಟ್ಟಿದೆ. ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡಲಾಗುತ್ತಿದೆ ಎನ್ನುವ ಆರೋಪವೂ ಕೇಳಿಬಂದಿದೆ.
ನಿನ್ನೆ ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುವಾಗ ಎರಡು ವಿದ್ಯಾರ್ಥಿಗಳ ಗ್ಯಾಂಗ್ ನಡುವೆ ಹೊಡೆದಾಟ ನಡೆದಿದೆ. ಪೊಲೀಸರು ಪುಂಡರ ಹಾವಳಿ ತಡೆಯಲು ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸದ್ಯ ತಿಪಟೂರು ನಗರ ಠಾಣೆ ಪೊಲೀಸರು ವಿದ್ಯಾರ್ಥಿಗಳನ್ನು ಕರೆಸಿ ಬುದ್ಧಿ ಹೇಳಿ ಕಳುಹಿಸಿದ್ದಾರೆ.