ಬೆಂಗಳೂರು : ಏಪ್ರಿಲ್ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈಗಿನಿಂದಲೇ ಪಕ್ಷವನ್ನು ಬಲಗೊಳಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಯಾವುದೇ ಕ್ಷಣದಲ್ಲೂ ಘೋಷಣೆಯಾಗಬಹುದು. ಏಪ್ರಿಲ್ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾವು ಯಾರನ್ನೂ ಹಗುರವಾಗಿ ತೆಗೆದುಕೊಳ್ಳಬಾರದು. ಮೋದಿ ಸರ್ಕಾರದ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸಬೇಕು. ನಾವೆಲ್ಲಾ ಬಿಜೆಪಿ ಕಾರ್ಯಕರ್ತರು ಎಂಬುದು ಹೆಮ್ಮೆ ಇದೆ ಎಂದು ಹೇಳಿದ್ದಾರೆ.