ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾನೇ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ತಿಳಿಸಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಧಾರವಾಡ ಲೋಕಸಭಾ ಅಭ್ಯರ್ಥಿ ನಾನೇ ಎಂದು ಸ್ವಯಂ ಘೋಷಣೆ ಮಾಡುವ ಮೂಲಕ ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಗೆ ಟಾಂಗ್ ನೀಡಿದ್ದಾರೆ.
ಇದೇ ವೇಳೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್ ಧಾರವಾಡದಿಂದ ಜೋಶಿ ಬಿಟ್ಟರೆ ಯಾರು ಸ್ಪರ್ಧಿಸುತ್ತಾರೆ? ಅವರೇ ಅಭ್ಯರ್ಥಿ ಎಂದು ಹೇಳಿದರು.
ಮಾತು ಮುಂದುವರೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಕೂಡ ಬಿಜೆಪಿಗೆ ಬರಬಹುದು. ಇಂದು ಕಾರ್ಯಕಾರಿಣಿ ಸಭೆಯಲ್ಲಿ ಜಗದೀಶ್ ಶೆಟ್ಟರ್ ಸಿಕ್ಕಿದ್ದರು. ಶೆಟ್ಟರ್ ಗೆ ವೆಲ್ ಕಮ್ ಬ್ಯಾಕ್ ಎಂದು ಹೇಳಿದ್ದೇನೆ. ಶೆಟ್ಟರ್ ಮತ್ತೆ ಬಿಜೆಪಿಗೆ ಬಂದಿದ್ದು ನನಗಂತು ಖುಷಿ ಇದೆ ಎಂದರು.