ಬೆಂಗಳೂರು : ರಾಜ್ಯ ಸರ್ಕಾರವು ಅಸಮಾನತೆ ಹೋಗಲಾಡಿಸಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದು ಹೇಳಿದ್ದಾರೆ.