ಮೈಸೂರು : 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಲ ತಂದೆಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1.01ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಶನಿವಾರ ಈ ತೀರ್ಪು ನೀಡಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಪರಮಾನಂದ (31) ಶಿಕ್ಷೆಗೆ ಗುರಿಯಾದವ. ಈತ ಮೈಸೂರಿನ ಮಹಿಳೆಯನ್ನು ಎರಡನೇ ವಿವಾಹವಾಗಿದ್ದು, ದಂಪತಿಗೆ 14 ವರ್ಷದ ಪುತ್ರಿ ಇದ್ದಳು. ಮಲ ತಂದೆಯಾದ ಈತ ಬಾಲಕಿಯ ಮೇಲೆ ಲೌಂಗಿಕ ದೌರ್ಜನ್ಯ ಎಸಗಿದ್ದ. ಸದ್ಯ ಆರೋಪಿಗೆ ಕೋರ್ಟ್ ಜೈಲು ಶಿಕ್ಷೆ ನೀಡಿದೆ.