HomeKarnatakaಫೆ. 10 ರಿಂದ ಮೂರು ದಿನ ಬಿಜೆಪಿ ‘ಗ್ರಾಮ ಚಲೋ’ ಅಭಿಯಾನ

ಫೆ. 10 ರಿಂದ ಮೂರು ದಿನ ಬಿಜೆಪಿ ‘ಗ್ರಾಮ ಚಲೋ’ ಅಭಿಯಾನ

ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಲು ಫೆಬ್ರವರಿ 10 ರಿಂದ ಮೂರು ದಿನಗಳ ಕಾಲ ರಾಜ್ಯ ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಇದೇ ವೇಳೆ ರಾಜ್ಯ ಸರ್ಕಾರದ ವೈಫಲ್ಯ ಬಗ್ಗೆ ಖಂಡಿಸಿ ಪ್ರತಿ ಮನೆಗೂ ಮಾಹಿತಿ ನೀಡಲಾಗುವುದು. ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಾಜಿ ಸಚಿವ ಸುನಿಲ್ ಕುಮಾರ್ ಅಭಿಯಾನದ ಸಂಚಾಲಕರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಫೆಬ್ರವರಿ 10, 11, 12ರಂದು ಪ್ರತಿ ಹಳ್ಳಿಯಲ್ಲಿಯೂ ಅಭಿಯಾನ ನಡೆಯಲಿದೆ. ರಾಜ್ಯದ 28,000 ಕಂದಾಯ ಗ್ರಾಮಗಳು, 19 ಸಾವಿರ ನಗರ ಬೂತ್ ಗಳನ್ನು ಸಂಪರ್ಕಿಸಲು ಉದ್ದೇಶಿಸಲಾಗಿದ್ದು, 40,000 ಕಾರ್ಯಕರ್ತರನ್ನು ಅಭಿಯಾನದಲ್ಲಿ ಜೋಡಿಸಲು ತೀರ್ಮಾನಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular