HomeKarnatakaBREAKING : ಹನುಮ ಧ್ವಜ ವಿವಾದ : ಮಂಡ್ಯದ ಕೆರಗೋಡು ಗ್ರಾಮದಲ್ಲಿ 'ನಿಷೇಧಾಜ್ಞೆ' ಜಾರಿ

BREAKING : ಹನುಮ ಧ್ವಜ ವಿವಾದ : ಮಂಡ್ಯದ ಕೆರಗೋಡು ಗ್ರಾಮದಲ್ಲಿ ‘ನಿಷೇಧಾಜ್ಞೆ’ ಜಾರಿ

ಮಂಡ್ಯ : ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದಾರೆ. ಇದರಿಂದ ಪ್ರತಿಭಟನೆಯ ಜೋರಾಗಿದ್ದು, ಜಿಲ್ಲಾಡಳಿತ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿದೆ. 

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮ ಧ್ವಜವನ್ನು ಹಾರಿಸಲಾಗಿತ್ತು. ನಂತರ ಧ್ವಜ ತೆರವಿಗೆ ಅಧಿಕಾರಿಗಳು ಮುಂದಾದ ಹಿನ್ನೆಲೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಕೆರಗೋಡು ಗ್ರಾಮದಲ್ಲಿ ಭಾರಿ ಗಲಾಟೆ ನಡೆದಿದ್ದು, ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಧ್ವನಿವರ್ಧಕದ ಮೂಲಕ ಪೊಲೀಸರು ಎಚ್ಚರಿಕೆ ನೀಡಿದ್ದು, ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿ ಬೃಹತ್ ಹನುಮ ಧ್ವಜವನ್ನು ಹಾರಿಸಲಾಗಿತ್ತು. ನಂತರ ಧ್ವಜ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಧ್ವಜ ತೆರವು ಮಾಡದಂತೆ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದರು.ದ್ವಜ ಕಟ್ಟೆಯನ್ನು ಸುತ್ತುವರೆದಿದ್ದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದರು. ನಂತರ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಪೊಲೀಸರು 108 ಅಡಿ ಎತ್ತರದಲ್ಲಿದ್ದ ಬೃಹತ್ ಹನುಮ ಧ್ವಜವನ್ನು ಕೆಳಗಿಳಿಸಿ ತೆರವುಗೊಳಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular