alex Certify BIG NEWS: 2 ವರ್ಷಕ್ಕೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸೀಮಿತ ವಿಚಾರ; ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2 ವರ್ಷಕ್ಕೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸೀಮಿತ ವಿಚಾರ; ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಧಿಕೃತ ಆದೇಶ ಹೊರಡಿಸಿದೆ. 2 ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಡಿಸಿಸಿಎಂ ಡಿ.ಕೆ.ಶಿವಕುಮಾರ್, ಬೇರೆಯವರಿಗೂ ಅಧಿಕಾರ ಹಂಚಬೇಕು. ಹಾಗಾಗಿ 2 ವರ್ಷಕ್ಕೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸೀಮಿತ ಮಾಡಿದ್ದೇವೆ ಎಂದರು.

ಶೀಘ್ರವೇ ಲೋಕಸಭಾ ಚುನಾವಣೆ ಬರಲಿದೆ, ನೀತಿ ಸಂಹಿತೆ ಜಾರಿಯಾಗಲಿದೆ. 2 ವರ್ಷದ ಬಳಿಕ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು. ಹೈಕಮಾಂಡ್ ಆದೇಶವನ್ನು ನಾವು ಪಾಲಿಸುತ್ತೇವೆ. ಇದರಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸ್ಟ್ಯಾಂಡ್ ಏನೂ ಇಲ್ಲ. ಪಕ್ಷಕ್ಕೆ ಅನೇಕ ಜನರು ದುಡಿದಿದ್ದಾರೆ. ಅವರಿಗೂ ಅಧಿಕಾರ ಸಿಗಬೇಕು ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...